ಇತ್ತೀಚೆಗೆ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ಉದ್ದಿಮೆಗಳ ಸಾಮಾಜಿಕ ಬದ್ಧತೆ’ ಎಂಬ ವಿಷಯದ ಬಗ್ಗೆ ಅತಿಥಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಸೇಕ್ರೆಡ್ ಹಾರ್ಟ್ ಕಾಲೇಜಿನ ಉಪನ್ಯಾಸಕರಾದ ಶ್ರೀ ನೆಲ್ಸನ ಮೋನಿಸ್ ಆಗಮಿಸಿ ವಿದ್ಯಾರ್ಥಿಗಳಿಗೆ ಉದ್ದಿಮೆಗಳ ಸಾಮಾಜಿಕ ಬದ್ಧತೆ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು. ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿದ್ದರು. ವೇದಿಕೆಯಲ್ಲಿ ಪದವಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ವಾಣಿಜ್ಯ ಸಂಘದ ಸಂಯೋಜಕರಾದ ಶ್ರೀ ಪ್ರಮೋದ್ ಕುಮಾರ್, ಕಾರ್ಯದರ್ಶಿ ಪೂಜಿತ್ ಜೈನ್ ಉಪಸ್ಥಿತರಿದ್ದರು. ಶ್ವೇತಾಶ್ರೀ ಕಾರ್ಯಕ್ರಮ ನಿರೂಪಿಸಿ, ಶ್ವೇತಾ ವಂದಿಸಿದರು.