ಸಂತ ಅಂತೋನಿ ವಿದ್ಯಾ ಸಂಸ್ಥೆಗಳು, ನಾರಾವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸ್ವಾಮಿ ಲುವಿಸ್ ಕುಟಿನ್ಹೊರವರು ವಹಿಸಿದ್ದರು. ನಾರಾವಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಯಾದ ವಂದನೀಯ ಸ್ವಾಮಿ ವಲೇರಿಯನ್ ಫೆರ್ನಾಂಡಿಸ್‍ರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುತ್ತಿರುವ ಭುವನಜ್ಯೋತಿ ಎಜ್ಯುಕೇಶನಲ್ ಟ್ರಸ್ಟ್‍ನ ಶ್ರೀ ಪ್ರಶಾಂತ್ ಡಿ’ಸೋಜ ಹಾಗೂ ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುತ್ತಿರುವ ಶ್ರೀ ರೊನಾಲ್ಡ್ ಫೆರ್ನಾಂಡಿಸ್ ಇವರನ್ನು ಶಿಕ್ಷಣ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು. ಅತಿಥಿಗಳಾಗಿ ಆಗಮಿಸಿದ ನಾರಾವಿ ಗ್ರಾಮ ಪಂಚಾಯತ್‍ನ ಅಧ್ಯಕ್ಷರಾದ ಶ್ರೀ ರವೀಂದ್ರ ಪೂಜಾರಿ ಹಾಗೂ ಇತ್ತೀಚೆಗೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ಸ್ವಾಗತಿಸಿದರು. ವೇದಿಕೆಯಲ್ಲಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ವಂದನೀಯ ಸ್ವಾಮಿ ಕಿರಣ್ ಪಿಂಟೊ, ಸಿಸ್ಟರ್ ಮೇರಿ ರೊಡ್ರಿಗಸ್, ಶ್ರೀಮತಿ ಲಿಡ್ವಿನ್ ಲೋಬೊ, ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಅನಿಲ್ ರೋಶನ್, ಕಾರ್ಯದರ್ಶಿ ಶ್ರೀಮತಿ ಮೇಬಲ್ ಫೆರ್ನಾಂಡಿಸ್ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಶ್ರೀ ಅವಿಲ್ ಮೋರಾಸ್ ನಿರೂಪಿಸಿ ಶ್ರೀಮತಿ ವಿನ್ನಿ ಡಿ’ಸೋಜ ವಂದಿಸಿದರು. ವಿದ್ಯಾರ್ಥಿಗಳೀಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.