Sep 12 : ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ಅಂತರ್ ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಗೆ ‘ಕಲಾ ಸೊಬಗು – 2018’ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರಿಗೆ ನುಡಿನಮನ ಸಲ್ಲಿಸಲಾಯಿತು. ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ಅಟಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈಯುವುದರ ಮೂಲಕ ನಮನ ಸಲ್ಲಿಸಿದರು. ವೇದಿಕೆಯಲ್ಲಿರುವ ಗಣ್ಯರು ಪುಷ್ಪಾರ್ಚನೆ ಮಾಡಿ ನವiನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ಉಪಸ್ಥಿತರಿದ್ದರು.