Nov 12, 2018 : ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ದೀಪಾವಳಿ ಹಬ್ಬವನ್ನು ಇತ್ತೀಚೆಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದಯವಾಣಿ ಪತ್ರಿಕೆಯ ಪತ್ರಕರ್ತರಾದ ಶ್ರೀ ಲಕ್ಷ್ಮೀ ಮಚ್ಚಿನ ಮಾತನಾಡಿ ದೀಪಾವಳಿ ಹಬ್ಬದ ಮಹತ್ವವನ್ನು ಹಾಗೂ ಹಬ್ಬಗಳ ಹಿಂದೆ ಇರುವ ಉದ್ದೇಶ ಮತ್ತು ಹಿನ್ನೆಲೆಯನ್ನು ತಿಳಿಯಪಡಿಸಿದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ವಿದ್ಯಾರ್ಥಿ ಅಶ್ವಥ್ ಉಪಸ್ಥಿತರಿದ್ದರು. ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.