ಇತ್ತೀಚೆಗೆ ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ವಂದನೀಯ ಸ್ವಾಮಿ ಲುವಿಸ್ ಕುಟಿನ್ಹೊರವರು ವಹಿಸಿದ್ದರು. ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಕಾಣಿಕೆಯನ್ನು ನೀಡಿದರು.