ಆಗಸ್ಟ್ 29, 2017: ಸಂತ ಅಂತೋನಿ ಪದವಿ ಪೂರ್ವ ಕಾಲೇಜು, ನಾರಾವಿಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟವು ನಡೆಯಿತು. ಇದರ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ವಂದನೀಯ ಸ್ವಾಮಿ ಲ್ಯಾನ್ಸಿ ಜೋಯೆಲ್ ಸಲ್ಡಾನ್ಹ ಪಂದ್ಯಾಟವನ್ನು ಉದ್ಘಾಟಿಸಿದರು.
ತಾಲೂಕು ಮಟ್ಟದ ಈ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ವೇಣೂರು, ಪ್ರಥಮ ಹಾಗೂ ಸಂತ ಅಂತೋನಿ ಪದವಿ ಪೂರ್ವ ಕಾಲೇಜು, ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ವೇಣೂರು ಪ್ರಥಮ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಕೊಕ್ರಾಡಿ ದ್ವಿತೀ ಸ್ಥಾನ ಗಳಿಸಿದರು.