ಅಕ್ಟೋಬರ್ 30, 2017: ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ದಿನೇಶ್ ಪಿ.ಕೆ., ಬಳಂಜ ಇವರು ದೀಪಾವಳಿ ಹಬ್ಬದ ಮಹತ್ವವನ್ನು ತಿಳಿಸಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ ಹಾಗೂ ಇತರರು ಉಪಸ್ಥಿತರಿದ್ದರು. ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು.