March 6, 2018 : ಸಂತ ಅಂತೋನಿ ಕಾಲೇಜು, ನಾರಾವಿಯಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಸಮಾರಂಭವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ವಂದನೀಯ ಸ್ವಾಮಿ ಸೈಮನ್ ಡಿ’ಸೋಜರವರು ವಹಿಸಿ ವಿದ್ಯಾರ್ಥಿಗಳು ತಮ್ಮ ಸಂಸ್ಥೆಯಲ್ಲಿ ಪಡೆದಂತಹ ಮೌಲ್ಯಾಧಾರಿತ ಶಿಕ್ಷಣದ ಬೆಳಕನ್ನು ಮುಂದಿನ ಜೀವನದಲ್ಲಿ ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ಪ್ರಜ್ವಲಿಸಲು ಕರೆ ನೀಡಿದರು. ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಉತ್ತಮ ಯುವ ಜನಾಂಗದತ್ತ ಸಾಗಲು ಆಶೀರ್ವದಿಸಿದರು. ಉಪನ್ಯಾಸಕರಾದ ಶ್ರೀ ರಾಜೇಶ್ ಜೈನ್ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಶ್ರೀ ಸಂತೋಷ್ ಸಲ್ಡಾನ್ಹ, ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.