ಸಂತ ಅಂತೋನಿ ಪದವಿ ಪೂರ್ವ ಕಾಲೇಜು, ನಾರಾವಿ, ಇಲ್ಲಿ ಪ್ರಥಮ ಪಿ.ಯು.ಸಿ ಅಭಿನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಸ್ವಾಮಿ ಅರುಣ್ ವಿಲ್ಸನ್ ಲೋಬೊರವರು ವಹಿಸಿ ವಿದ್ಯಾರ್ಥಿಗಳಿಗೆ ಕಾಲೇಜಿನ ಚಟುವಟಿಕೆಗಳು ಹಾಗೂ ವ್ಯವಸ್ಥೆಯ ಬಗ್ಗೆ ಅರಿವು ನೀಡಿದರು. ಕಾಲೇಜಿನ ಉಪನ್ಯಾಸಕರು ಭಾಗವಹಿಸಿದರು. ಉಪನ್ಯಾಸಕರಾದ ಶ್ರೀ ಸಂತೋಷ್ ಸಲ್ಡಾನ್ಹರವರು ಕಾರ್ಯಕ್ರಮ ನಿರೂಪಿಸಿದರು.