June 21, 2022 : ಸಂತ ಅಂತೋನಿ ಪಿ. ಯು. ಕಾಲೇಜು, ನಾರಾವಿ ಶೇ. 97 ಫಲಿತಾಂಶವನ್ನು ಗಳಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಮಾನಸ ಭಟ್ ರವರಿಗೆ 586 ಅಂಕ ಮತ್ತು ವಾಣಿಜ್ಯ ವಿಭಾಗದಲ್ಲಿ ಆದಿತ್ಯ ಜಿ. ಕರ್ಮಾಕರ್ ಅವರಿಗೆ 586 ಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಒಟ್ಟು 130 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ವಿಜ್ಞಾನ ವಿಭಾಗದಲ್ಲಿ 10 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 27 ವಿದ್ಯಾರ್ಥಿಗಳು, ಕಲಾ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.